ಸ್ಯಾಮ್‌ಸಂಗ್ ಗ್ಯಾಲಕ್ಸಿ A21 ಸ್ಮಾರ್ಟ್‌ಫೋನ್ ಫೀಚರ್ಸ್ ಬಹಿರಂಗ!
ಟೆಕ್ ದಿಗ್ಗಜ ಸ್ಯಾಮ್‌ಸಂಗ್ ತನ್ನ ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದಲೇ ಗುರುತಿಸಿಕೊಂಡಿದೆ. ಹಲವು ಹೊಸತುಗಳನ್ನ ಮಾರುಕಟ್ಟೆಗೆ ಪರಿಚಯಿಸಿ ಸೈ ಎನಿಸಿಕೊಂಡಿರುವ ಸ್ಯಾಮ್‌ಸಂಗ್ ಇತ್ತೀಚಿನ ದಿನಗಳಲ್ಲಿ ಆಪ್‌ಗ್ರೇಡ್ ಆವೃತ್ತಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುತ್ತಿದೆ. ಈ ಮೂಲಕ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸುತ್ತಿದೆ. ಸದ್ಯ ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳಿಂದ ಸೌಂಡ್ ಮಾಡ್ತಿರೋ ಸ್ಯಾಮ್‌ಸಂಗ್ ಇದೀಗ ತನ್ನ ಹೊಸ ಗ್ಯಾಲಕ್ಸಿ A21 ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ದತೆ ನಡೆಸಿದೆ.
ಹೌದು, ಸ್ಮಾರ್ಟ್‌ಫೋನ್ ವಲಯದಲ್ಲಿ ತನ್ನದೇ ವಿಶೇಷತೆಯಿಂದ ದಿಗ್ಗಜ ಬ್ರಾಂಡ್ ಎನಿಸಿಕೊಂಡಿರುವ ಸ್ಯಾಮ್‌ಸಂಗ್ ತನ್ನ ಹೊಸ ಗ್ಯಾಲಕ್ಸಿ A21 ಸ್ಮಾರ್ಟ್‌ಫೋನ್ ಬಿಡುಗಡೆಗೆ ವೇದಿಕೆ ಸಿದ್ದಪಡಿಸಿಕೊಳ್ತಿದೆ. ಹೊಸ ಮಾದರಿಯ ಆಕರ್ಷಕ ಫೀಚರ್ಸ್‌ಗಳನ್ನ ಈ ಸ್ಮಾರ್ಟ್‌ಫೋನ್‌ನಲ್ಲಿ ನಿರೀಕ್ಷಿಸಬಹುದು ಎಂದು ಈಗಾಗಲೇ ಕಂಪೆನಿ ಹೇಳಿಕೊಂಡಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದು ಆನ್‌ಲೈನ್ ಅಲ್ಲಿ ಲೀಕ್ ಆಗಿದೆ. ಸದ್ಯ ಆನ್‌ಲೈನ್ ಅಲ್ಲಿ ಲೀಕ್ ಆಗಿರುವ ಮಾಹಿತಿ ಪ್ರಕಾರ ಯಾವೆಲ್ಲಾ ಮಾಹಿತಿ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಯೋಣ ಬನ್ನಿ.
ಕೆಲ ದಿನಗಳ ಹಿಂದೆಯಷ್ಟೇ ತನ್ನ ಜನಪ್ರಿಯ M ಸರಣಿಯ ಸ್ಮಾರ್ಟ್‌ಫೋನ್‌ಗಳ ಪರಿಚಯಿಸಿದ್ದ ಸ್ಯಾಮ್‌ಸಂಗ್ ಇದೀಗ ತನ್ನ A ಸರಣಿಯ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲಿದೆ. A ಸರಣಿಯ ಸ್ಮಾರ್ಟ್‌ಫೊನ್‌ಗಳ ಮೂಲಕ ಸಂಚಲನ ಸೃಷ್ಟಿಸಿದ್ದ ಸ್ಯಾಮ್‌ಸಂಗ ಈ ಭಾರಿ ಗ್ಯಾಲಕ್ಸಿ A21 ಅನ್ನು ಪರಿಚಯಿಸಲಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಪ್ರೊಸೆಸರ್ ಮತ್ತು ಇದು ಕಾರ್ಯನಿರ್ವಹಿಸುವ ಆಂಡ್ರಾಯ್ಡ್ ಆವೃತ್ತಿಯ ವಿಶೇಷತೆಗಳ ಬಗ್ಗೆ ಮಾಹಿತಿ ಲಬ್ಯವಾಗಿದೆ. ಲಭ್ಯ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್ ಎಕ್ಸಿನೋಸ್ 850 ಪ್ರೊಸೆಸರ್ ಅನ್ನು ಹೊಂದಿರಲಿದೆ ಎನ್ನಲಾಗ್ತಿದೆ. ಜೊತೆಗೆ 3GB RAM ಅನ್ನು ಹೊಂದಿರುವ ಸಾದ್ಯತೆ ಇದೆ ಎನ್ನಲಾಗ್ತಿದೆ.
ಇದಲ್ಲದೆ ಈ ಸ್ಮಾರ್ಟ್‌ಫೋನ್ ಬಗ್ಗೆ ಗೀಕ್‌ಬೆಂಚ್‌ನಲ್ಲಿ ಮಾಹಿತಿ ಲಬ್ಯವಾಗಿದ್ದು, ಇದರ ಪ್ರಕಾರ ಈ ಸ್ಮಾರ್ಟ್‌ಫೋನ್ ಸಿಂಗಲ್-ಕೋರ್ ಸ್ಕೋರ್ 183 ಮತ್ತು ಮಲ್ಟಿ-ಕೋರ್ ಸ್ಕೋರ್ 1074 ಅನ್ನು ಹೊಂದಿರಲಿದ್ದು, ಇದು ಎಕ್ಸಿನೋಸ್ 850 ಚಿಪ್‌ಸೆಟ್‌ನಿಂದ ನಿಯಂತ್ರಿಸಲ್ಪಡುತ್ತದೆ ಎನ್ನಲಾಗಿದೆ. ಆದರೆ ಎಕ್ಸಿನೋಸ್ 850 ಅನ್ನೊದು ಕೂಡ ಅಂತಿಮ ಎಂದು ಹೇಳುವುದಕ್ಕೆ ಆಗೋದು ಇಲ್ಲ. ಆದರೆ 2.00GHz ನ ಮೂಲ ಆವರ್ತನದೊಂದಿಗೆ ಇದು ಎಂಟು ಕೋರ್‌ಗಳನ್ನು ಹೊಂದಿದೆ ಎಂದು ಪಟ್ಟಿಯು ತೋರಿಸುತ್ತದೆ. ಜೊತೆಗೆ ಇದು ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಅನ್ನೊದು ಪಕ್ಕಾ ಆಗಿದೆ.