ಪೇಷಾವರ : ಶನಿವಾರ ವಾಯವ್ಯ ಪಾಕಿಸ್ತಾನದಲ್ಲಿ ಬುಡಕಟ್ಟು ಘರ್ಷಣೆಯಲ್ಲಿ ಕನಿಷ್ಟ 11 ಮಂದಿ ಸಾವನ್ನಪ್ಪಿದ್ದು ಇತರ 8 ಮಂದಿ ಗಾಯಗೊಂಡಿರುವುದಾಗಿ ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.
ಖೈಬರ್ ಪಖ್ತೂಂಕ್ವಾ ಪ್ರಾಂತದ ಕುರ್ರಮ್ ಜಿಲ್ಲೆಯಲ್ಲಿ ಎರಡು ಬುಡಕಟ್ಟು ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿ ಬಳಿಕ ಘರ್ಷಣೆ ಜಿಲ್ಲೆಯ ಇತರೆಡೆಗೆ ಹಬ್ಬಿದ್ದು ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಘರ್ಷಣೆಗೆ ಕಾರಣ ತಿಳಿದು ಬಂದಿಲ್ಲ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಎರಡೂ ಬುಡಕಟ್ಟಿನ ಹಿರಿಯರ ಮಧ್ಯಸ್ಥಿಕೆಯಲ್ಲಿ ಸಂಧಾನ ಮಾತುಕತೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.