ಅಮೆರಿಕ: ಯುಇಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಪ್ರಚಂಡ ಮುನ್ನಡೆ ಸಾಧಿಸಿರುವ ಬೆನ್ನಲ್ಲಿ ಇದು ಅಮೆರಿಕನ್ನರಿಗೆ ಅದ್ಭುತ ಗೆಲುವು, ನಾವು ಇತಿಹಾಸ ನಿರ್ಮಿಸಿದ್ದೇವೆ ನಾನು ಅವರನ್ನು ನಿರಾಸೆಗೊಳಿಸುವುದಿಲ್ಲ ಎಂದು ಹೇಳುವ ಮೂಲಕ ಗೆಲುವನ್ನು ಘೋಷಿಸಿಕೊಂಡಿದ್ದಾರೆ.
ಫ್ಲೋರಿಡಾದ ಪಾಮ್ ಬೀಚ್ನಲ್ಲಿ ನಡೆದ ಚುನಾವಣಾ ವೀಕ್ಷಣಾ ಕಾರ್ಯಕ್ರಮದಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಹಿಂದೆಂದೂ ಕಂಡಿರದ ರಾಜಕೀಯ ಗೆಲುವು. ನಾನು ಅಮೆರಿಕಾದ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇದು ಹಿಂದೆಂದೂ ಯಾರೂ ನೋಡದ ಚಳುವಳಿಯಾಗಿದೆ.̤ ನಾವು ನಮ್ಮ ಗಡಿಗಳನ್ನು ಸರಿಪಡಿಸಲು ಹೊರಟಿದ್ದೇವೆ, ನಮ್ಮ ದೇಶದ ಎಲ್ಲಾ ಸಮಸ್ಯೆಯನ್ನು ಸರಿಪಡಿಸುತ್ತೇವೆ. ನಾವು ಇತಿಹಾಸವನ್ನು ನಿರ್ಮಿಸಿದ್ದೇವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಪ್ರಸ್ತುತ, ಟ್ರಂಪ್ 25 ರಾಜ್ಯಗಳಲ್ಲಿ ಮತ್ತು ಕಮಲಾ ಹ್ಯಾರಿಸ್ 16 ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಡೊನಾಲ್ಡ್ ಟ್ರಂಪ್ 270 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಮಲಾ ಹ್ಯಾರಿಸ್ 214 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಗೆಲುವಿಗೆ 270 ಸ್ಥಾನಗಳ ಅವಶ್ಯಕತೆಯಿದ್ದು, ಈ ಸ್ಥಾನಗಳಲ್ಲಿ ಟ್ರಂಪ್ ಮುನ್ನಡೆ ಸಾಧಿಸಿದ್ದಾರೆ.