EBM News Kannada
Leading News Portal in Kannada

2020ರ ಅಧ್ಯಕ್ಷೀಯ ಚುನಾವಣೆ | ಟ್ರಂಪ್ ವಿರುದ್ಧದ ಪ್ರಕರಣ ವಜಾ | 2020 Presidential Election

0


ವಾಷಿಂಗ್ಟನ್,: ಡೊನಾಲ್ಡ್ ಟ್ರಂಪ್ ವಿರುದ್ಧ ದಾಖಲಾಗಿದ್ದ ಫೆಡರಲ್ ಕ್ರಿಮಿನಲ್ ಪ್ರಕರಣವನ್ನು ಅಮೆರಿಕದ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿರುವುದಾಗಿ ವರದಿಯಾಗಿದೆ.

2020ರ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ಒಪ್ಪಿಕೊಳ್ಳದೆ ಅಧಿಕಾರಕ್ಕೆ ಅಂಟಿಕೊಳ್ಳಲು ಪ್ರಯತ್ನಿಸಿದ ಹಾಗೂ ಜನವರಿ 6ರಂದು ಕ್ಯಾಪಿಟಲ್ ಹಿಲ್ಸ್ ಮೇಲೆ ತನ್ನ ಬೆಂಬಲಿಗರು ನಡೆಸಿದ್ದ ದಾಳಿಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಟ್ರಂಪ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ ನವೆಂಬರ್ 5ರಂದು ನಡೆದಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವು ಸಾಧಿಸಿರುವುದರಿಂದ ಹಾಲಿ ಅಧ್ಯಕ್ಷರನ್ನು ವಿಚಾರಣೆಗೆ ಒಳಪಡಿಸುವ ವಿರುದ್ಧ ನ್ಯಾಯಾಂಗ ಇಲಾಖೆಯ ನೀತಿಯನ್ನು ಉಲ್ಲೇಖಿಸಿರುವ ಅಮೆರಿಕದ ಜಿಲ್ಲಾ ಕೋರ್ಟ್ ನ್ಯಾಯಾಧೀಶೆ ತಾನ್ಯಾ ಚುಟ್ಕಾನ್ ಪ್ರಕರಣವನ್ನು ವಜಾಗೊಳಿಸುವುದಾಗಿ ಸೋಮವಾರ ತೀರ್ಪು ಪ್ರಕಟಿಸಿದ್ದಾರೆ.

ಹಾಲಿ ಅಧ್ಯಕ್ಷರನ್ನು ಕ್ರಿಮಿನಲ್ ವಿಚಾರಣೆಗೆ ಒಳಪಡಿಸುವುದು ದೇಶದ ಮುಖ್ಯ ಕಾರ್ಯನಿರ್ವಾಹಕನ ಕಾರ್ಯನಿರ್ವಹಣೆಯ ಸಾಮರ್ಥ್ಯವನ್ನು ದುರ್ಬಲಗೊಳಿಸುವ ಕಾರಣ ಅಮೆರಿಕದ ಸಂವಿಧಾನವನ್ನು ಉಲ್ಲಂಘಿಸುತ್ತದೆ ಎಂದು 1970ರಲ್ಲಿ ನ್ಯಾಯ ಇಲಾಖೆ ನೀಡಿದ್ದ ಹೇಳಿಕೆಯನ್ನು ಜಿಲ್ಲಾ ನ್ಯಾಯಾಧೀಶರು ಉಲ್ಲೇಖಿಸಿದ್ದಾರೆ.

ಇದು ಮುಂದಿನ ವರ್ಷದ ಜನವರಿ 6ರಂದು ಅಧಿಕಾರ ಸ್ವೀಕರಿಸಲಿರುವ ಚುನಾಯಿತ ಅಧ್ಯಕ್ಷ ಟ್ರಂಪ್‍ಗೆ ದೊರೆತ ದೊಡ್ಡ ಕಾನೂನು ಗೆಲುವು ಎಂದು ವಿಶ್ಲೇಷಿಸಲಾಗಿದೆ. ಟ್ರಂಪ್ ವಿರುದ್ಧ 4 ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು ಅದರಲ್ಲಿ ಎರಡು ರದ್ದುಗೊಂಡಿದೆ. ನ್ಯೂಯಾರ್ಕ್‍ನಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಟ್ರಂಪ್ ಶಿಕ್ಷೆಗೊಳಗಾಗಿದ್ದರೆ ಜಾರ್ಜಿಯಾ ಕೋರ್ಟ್‍ನಲ್ಲಿ ದಾಖಲಾಗಿರುವ ಪ್ರಕರಣ ಅನಿಶ್ಚಿತ ಸ್ಥಿತಿಯಲ್ಲಿದೆ.

Leave A Reply

Your email address will not be published.