ಇಸ್ಲಾಮಾಬಾದ್ : ಇಸ್ಲಾಮಾಬಾದ್‍ನಲ್ಲಿ ಕಳೆದ ವಾರ ನಡೆದಿದ್ದ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯವು ಸೋಮವಾರ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‍ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ವರದಿಯಾಗಿದೆ.
ಅಡಿಯಾಲಾ ಜೈಲಿನಲ್ಲಿ ಬಂಧನದಲ್ಲಿರುವ ಇಮ್ರಾನ್ ಖಾನ್‍ರ ಬಿಡುಗಡೆಗೆ ಆಗ್ರಹಿಸಿ ಪಾಕಿಸ್ತಾನ್ ತೆಹ್ರೀಕೆ ಇನ್ಸಾಫ್(ಪಿಟಿಐ) ಪಕ್ಷ ನವೆಂಬರ್ 24ರಂದು ಇಸ್ಲಾಮಾಬಾದ್‍ನಲ್ಲಿ ನಡೆಸಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಹಲವರು ಮೃತಪಟ್ಟಿದ್ದರು. ಈ ಪ್ರತಿಭಟನೆಗೆ ಇಮ್ರಾನ್ ಖಾನ್ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು. ವಿಚಾರಣೆ ನಡೆಸಲು ಇಮ್ರಾನ್ ಖಾನ್‍ಗೆ ಪೊಲೀಸ್ ಕಸ್ಟಡಿ ವಹಿಸುವಂತೆ ಕೋರಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ ಇಮ್ರಾನ್‍ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.