EBM News Kannada
Leading News Portal in Kannada

ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ 1,445 ಮಂದಿಗೆ ಕೊರೋನಾ: 25,000 ಜನರಿಗೆ ಗೃಹಬಂಧನ

0

ನವದೆಹಲಿ(ಏ.06): ರಾಷ್ಟ್ರ ರಾಜಧಾನಿಯಲ್ಲಿ ಮಾರ್ಚ್ 10ನೇ ತಾರೀಕಿನಂದು ನಡೆದ ನಿಜಾಮುದ್ದೀನ್ ಧಾರ್ಮಿಕ ಸಭೆ ಈಗ ದೇಶಾದ್ಯಂತ ಆತಂಕದ ಅಲೆಯನ್ನು ಸೃಷ್ಟಿಸಿದೆ. ಇಲ್ಲಿನ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಮುಸ್ಲಿಂ ಸಮುದಾಯದ ತಬ್ಲಿಫಿ ಜಮಾತ್ ಧಾರ್ಮಿಕ ಸಭೆ ನಡೆದಿತ್ತು. ಈ ಸಭೆಯಲ್ಲಿ ಇಂಡೋನೇಷ್ಯಾ, ಮಲೇಷ್ಯಾ ಸೇರಿದಂತೆ ಅನೇಕ ದೇಶಗಳ ವಿದೇಶೀಯರು ಸೇರಿದಂತೆ ಸುಮಾರು 2,000ಕ್ಕೂ ಅಧಿಕ ಜನರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಪೈಕಿ ತೆಲಂಗಾಣದ 6 ಜನರು ಸೇರಿದಂತೆ ಒಟ್ಟು 10 ಸಾವನ್ನಪ್ಪಿದ್ದರು. ಇಷ್ಟು ಮಂದಿ ಕೊರೋನಾದಿಂದಲೇ ಮೃತಪಟ್ಟರು ಎಂಬುದು ಆತಂಕದ ಸಂಗತಿ. ಈ ಮಧ್ಯೆ ಮತ್ತೊಂದು ಆತಂಕಕಾರಿ ಸುದ್ದಿ ಬೆಳಕಿಗೆ ಬಂದಿದೆ.

ಇಲ್ಲಿನ ನಿಜಾಮುದ್ದೀನ್​​ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ಮತ್ತವರ ಸಂಪರ್ಕಕ್ಕೆ ಬಂದ 25,000ಕ್ಕೂ ಅಧಿಕ ಜನರನ್ನು ಗೃಹ ಬಂಧನದಲ್ಲಿ ಇಡಲಾಗಿದೆ. ಜತೆಗೆ ಕರ್ನಾಟಕ ಸೇರಿದಂತೆ 17ಕ್ಕೂ ಹೆಚ್ಚು ರಾಜ್ಯಗಳಿಂದ ಈ ಸಭೆಯಲ್ಲಿ ಪಾಲ್ಗೊಂಡಿದ್ದ 1,445ಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಭಾರತದಲ್ಲಿ ಇದುವರೆಗೂ 4,067 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಶೇ. 35ರಷ್ಟು ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದವರು ಆಗಿದ್ದಾರೆ.
ದೆಹಲಿಯ ನಿಜಾಮುದ್ದೀನ್​ನ ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರಿಂದ ಕೊರೋನಾ ಸೋಂಕು ದೇಶದೆಲ್ಲೆಡೆ ಹರಡಲಾರಂಭಿಸಿದೆ. ಇದರಿಂದಾಗಿ ಆ ಸಭೆಯಲ್ಲಿ ಪಾಲ್ಗೊಂಡವರನ್ನು ಆಸ್ಪತ್ರೆಗಳಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಸಾವಿರಾರು ಜನಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರಿಂದ ದೆಹಲಿಯ ಆಸ್ಪತ್ರೆಗಳಲ್ಲಿ ಜಾಗ ಸಾಕಾಗದೆ ರೈಲಿನ ಕಂಪಾರ್ಟ್​ಮೆಂಟ್​ಗಳನ್ನೇ ಕ್ವಾರಂಟೈನ್​ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ.

Leave A Reply

Your email address will not be published.