ಬೆಂಗಳೂರು, ಜೂನ್ 11 : ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ವಿಚಾರದ ಬಗ್ಗೆ ಚರ್ಚೆಗಳು ನಡೆದಿವೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಾತಿಗೆ ಬೆಲೆ ಸಿಕ್ಕಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ.
ರಾಜ್ಯಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ಮುಗಿಯುತ್ತಿದ್ದಂತೆ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದೆ. ಒಟ್ಟು 7 ಸದಸ್ಯರನ್ನು ಕರ್ನಾಟಕ ವಿಧಾನಸಭೆಯಿಂದ ಪರಿಷತ್ಗೆ ಆಯ್ಕೆ ಮಾಡಬೇಕಿದೆ. ಪರಿಷತ್ ಪ್ರವೇಶಿಸಲು ಪೈಪೋಟಿ ಆರಂಭವಾಗಿದೆ.
ವಿಧಾನ ಪರಿಷತ್ ಚುನಾವಣೆ ಜೂನ್ 29ರಂದು ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಯಡಿಯೂರಪ್ಪ ಮಾತೇ ಅಂತಿಮ ಎಂದು ಬಿಜೆಪಿ ಹೈಕಮಾಂಡ್ ತೀರ್ಮಾನ ಕೈಗೊಂಡಿದೆ. ಸಂಖ್ಯಾ ಬಲದ ಆಧಾರದ ಮೇಲೆ ಬಿಜೆಪಿ 4 ಸ್ಥಾನಗಳಲ್ಲಿ ಜಯಗಳಿಸಬಹುದಾಗಿದೆ.